

ಬೆಂಗಳೂರು: ಲೋಕಸಭೆ ಚುನಾವಣೆಯ ಬಳಿಕ ಐದು ಗ್ಯಾರಂಟಿ ಸ್ಥಗಿತಗೊಳ್ಳುವ ಬಗ್ಗೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ನೀಡಿದ್ದ ಹೇಳಿಕೆಯು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಕಾಂಗ್ರೆಸ್ ಸರ್ಕಾರ ಅವಮಾನಿಸುತ್ತಿದೆ ಎಂದು ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಶಾಸಕನ ಹೇಳಿಕೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷವೂ ‘ಗ್ಯಾರಂಟಿ’ ಮುಂದುವರಿಯಲಿದೆ ಎಂದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಶಾಸಕ ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.
ಶಾಸಕ ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.
ಶಾಸಕ ಬಾಲಕೃಷ್ಣ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ನಾಯಕರೇ ಕಿಡಿಕಾಡಿದ್ದಾರೆ. ಸಚಿವ ಎಂಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದು ಪ್ರತಿಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.