ಜಗದೀಶ್ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಪಕ್ಷ ತೀರ್ಮಾನಿಸಿದೆ: ಎಂ.ಬಿ.ಪಾಟೀಲ್

MB Patil
ಸಾಂದರ್ಭಿಕ ಚಿತ್ರ
Published on

ತುಮಕೂರು: ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ ಶೆಟ್ಟರ್ ಅವರಿಗೆ ಉನ್ನತ ಸ್ಥಾನಮಾನ ಕೊಡುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕರು ಸೇರಿಕೊಂಡು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ವಿಧಾನಸಭೆಯಲ್ಲಿ ಶಾಸಕರ‌ ಪ್ರಮಾಣವಚನದ ಬಳಿಕ ಸಚಿವ ಎಂಬಿ ಪಾಟೀಲ್ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದಿದ್ದೇವೆ. ಚುನಾಣೆಯಲ್ಲಿ ಸೋಲಾಗಿದ್ದರೂ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕೆಂದು ಎಲ್ಲರೂ ತಿರ್ಮಾನ ಮಾಡಿದ್ದೇವೆ ಎಂದರು.

ಚುನಾವಣೆಯಲ್ಲಿ ಲಿಂಗಾಯತ ಧರ್ಮದವರು ಸೇರಿದಂತೆ, ಎಲ್ಲಾ ಧರ್ಮದವರು ಬೆಂಬಲಿಸಿದ್ದಾರೆ. ಅಪಪ್ರಚಾರದಿಂದ ದೂರ ಇದ್ದಂತಹ ಲಿಂಗಾಯತರು ಚುನಾವಣೆಯ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದಿದ್ದಾರೆ. ಲಿಂಗಾಯತರಿಗೆ ಸೂಕ್ತ ನ್ಯಾಯ ಒದಗಿಸುವಂತೆ ಹೈಕಮಾಂಡ್​ಗೆ ಮನವರಿಕೆ ಮಾಡಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net