ಅಕ್ಕಿ ವಿಷಯದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ ಎಂದ ಸಂಸದ ತೇಜಸ್ವಿ ಸೂರ್ಯ

Tejasvi Surya
Published on

ದೆಹಲಿ: ಕಾಂಗ್ರೆಸ್ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ಅರ್ಧ ಸುಳ್ಳಿನ ಕಂತೆಗಳ ಮೇಲೆ ಸರ್ಕಾರವನ್ನು ನಡೆಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಶಾಂತಿ, ನೆಮ್ಮದಿ ಇಳಿಕೆ, ಜನಸಾಮಾನ್ಯರ ಆತಂಕ ಏರಿಕೆ!; ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಅಕ್ಕಿ ಖರೀದಿಯ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಸಂಸದರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದೇಶದ ಇತರ ಪ್ರಜೆಗಳಂತೆ ಕರ್ನಾಟಕದ ಪ್ರತಿಯೊಬ್ಬ ಪ್ರಜೆಯು 5 ಕೆಜಿ ಆಹಾರ ಧಾನ್ಯವನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಿದರು.

ಆದರೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡಲು ಭಾರತೀಯ ಆಹಾರ ನಿಗಮಕ್ಕೆ(ಎಫ್‌ಸಿಐ) ಅವಕಾಶ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದು, ಇದನ್ನು ಸಂಸದರು ತಳ್ಳಿ ಹಾಕಿದ್ದಾರೆ. ಕಾಂಗ್ರೆಸ್​ ಸುಳ್ಳಿನ ಮೇಲೆ ಸರ್ಕಾರವನ್ನು ನಡೆಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ವರದಕ್ಷಿಣೆ ಕೇಳಿದ ಮದುಮಗನನ್ನು ಮರಕ್ಕೆ ಕಟ್ಟಿ ಹಾಕಿದ ವಧುವಿನ ಸಂಬಂಧಿಕರು!

ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್​ ಟನ್​ ಅಗತ್ಯವಿದೆ ಎಂದು ಕೋರಿ ಜೂನ್‌ 9ರಂದು ಪತ್ರ ಬರೆದಿದ್ದೆವು.

ಈ ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆಂದು ಘೋಷಿಸಿದ್ದೆವು. ಆದರೆ ಎಫ್​ಸಿಐ ಸದ್ಯ ನಿರಾಕರಿಸುತ್ತಿದೆ ಎಂದು ಸಿಎಂ ಆರೋಪಿಸಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net