ಬ್ಯೂಟಿಷಿಯನ್ ಜತೆ ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್ ಮುಖಂಡ; ಆರೋಪಿ ಪೊಲೀಸ್ ವಶಕ್ಕೆ..

Karjagi
Published on

ಧಾರವಾಡ: ಬ್ಯೂಟಿಷಿಯನ್​ ಯುವತಿ ಜತೆ ಕಾಂಗ್ರೆಸ್ ಮುಖಂಡ ಅನುಚಿತವಾಗಿ ವರ್ತಿಸಿದ್ದು, ಆತನ ವಿರುದ್ಧ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಧಾರವಾಡದಲ್ಲಿ ಈ ಪ್ರಕರಣ ನಡೆದಿದೆ.

ಸೆಲೂನ್ ಹಾಗೂ ಸ್ಪಾ ಮಾಲೀಕನೂ ಆಗಿರುವ ಮನೋಜ್ ಕರ್ಜಗಿ (54) ಎಂಬಾತನೇ ಆರೋಪಿ. ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದ್ದು, ವಿದ್ಯಾಗಿರಿ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕನಾಗಿದ್ದ ಕರ್ಜಗಿ, ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತನೂ ಆಗಿದ್ದಾನೆ. ಈತ ತನ್ನ ಸ್ಪಾದಲ್ಲಿ ಕೆಲಸಕ್ಕಿದ್ದ 19 ವರ್ಷದ ಬ್ಯೂಟಿಷಿಯನ್ ಜತೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ಯುವತಿ ಕೂಗಿಕೊಂಡು ಹೊರಗೆ ಬಂದಿದ್ದಾಳೆ. ಬಳಿಕ ಸ್ನೇಹಿತರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಯುವತಿಯ ದೂರಿನ ಮೇರೆಗೆ ಪೊಲೀಸರು ಕರ್ಜಗಿಯನ್ನು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net