ಮತ್ತೊಮ್ಮೆ ದಕ್ಷಿಣದತ್ತ ಮುಖಮಾಡಿದ ರಾಹುಲ್​ಗಾಂಧಿ: ವಯನಾಡ್​ನಿಂದ ನಾಮಪತ್ರ ಸಲ್ಲಿಕೆ..

rahul
Published on

ವಯನಾಡ್(ಕೇರಳ): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇರಳದ ವಯನಾಡ್ ನಿಂದನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಭಾರಿ ಜನಸ್ತೋಮ ನೆರೆದಿದ್ದುದು ವಿಶೇಷವಾಗಿತ್ತು.

2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಲ್ಲಿ 10,92,197 ಮತಗಳ ಪೈಕಿ 7,06,367 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಈ ಕ್ಷೇತ್ರದಲ್ಲಿ ಸಿಪಿಐ ಅಭ್ಯರ್ಥಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.

ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಆಯ್ಕೆ ಬಯಸಿ ಸ್ಪರ್ಧಿಸುತ್ತಿದ್ದಾರೆ.

ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು. ರಾಹುಲ್ ಗಾಂಧಿ ಅವರು 2004, 2009 ಮತ್ತು 2014 ರಲ್ಲಿ ಅಮೇಥಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.

ಈ ಕುರಿತು ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮಾತನಾಡಿ, ರಾಹುಲ್ ಗಾಂಧಿ ಅಂತಿಮವಾಗಿ ವಯನಾಡಿಗೆ ನಾಮಪತ್ರ ಸಲ್ಲಿಸಲು ಬರುತ್ತಿರುವುದು ಒಳ್ಳೆಯದು, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net