VIDEO| ಗೃಹಜ್ಯೋತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಗದ್ದಲ; ಬಿಜೆಪಿ ಶಾಸಕರ ಮಾತಿಗೆ ಆಕ್ಷೇಪಿಸಿದ ಕಾಂಗ್ರೆಸ್​ ಕಾರ್ಯಕರ್ತರು

BP Harish
Published on

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ನಡುವಿನ ವಾಕ್ಸಮರ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ.

ದಾವಣೆಗೆರೆಯಲ್ಲಿ ಭಾನುವಾರ ನಡೆದ ಗೃಹಜ್ಯೋತಿ ಯೋಜನೆ ಉದ್ಘಾಟನಾ ಸಮಾರಂಭವನ್ನೂ ಉದ್ದೇಶಿಸಿ ಮಾತನಾಡುವ ವೇಳೆ ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್​ ಭಾಷಣಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ.

ಮೊದಲಿಗೆ ಮಾತನಾಡಿದ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಸವಂತಪ್ಪ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡದೆ ತಾರತಮ್ಯ ಎಸಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಮಾತನಾಡಿದ ಶಾಸಕ ಹರೀಶ್​ ನೀವೇನಾದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಕೇಳಿ ಅಕ್ಕಿ ಕೊಡುವುದಾಗಿ ಘೋಷಿಸಿದ್ದೀರಾ ಎಂದು ತಿರುಗೇಟು ನೀಡಿದ್ದಾರೆ. ಹರೀಶ್​ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್​ ಕಾರ್ಯಕರ್ತರು ಬಿಜೆಪಿ ಶಾಸಕನಿಗೆ ಘೇರಾವ್​ ಹಾಕಿದ್ದಾರೆ.

ಈ ವೇಳೆ ಮಾತನಾಡಿದ ಹರೀಶ್​ ನಾನು ಈ ಹಿಂದೆ ಕಾಂಗ್ರೆಸ್​ ಗರಡಿಯಲ್ಲೇ ಪಳಗಿದವನ್ನೂ. ನೀವು ಘರ್ಷಣೆ ಮಾಡುವುದನ್ನೂ ನಿಲ್ಲಿಸುವವರೆಗೂ ನಾನು ಇಲ್ಲಿಂದ ಕದಲುವುದಿಲ್ಲ. ಇದು ಸರ್ಕಾರಿ ಕಾರ್ಯಕ್ರಮ ಎಂಬ ಎಚ್ಚರವಿರಲಿ ಎಂದಿದ್ದಾರೆ. ಹೀಗೆ ಮಾಡುವುದಿದ್ದರೆ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದಿತ್ತು ಎಂದು ಕಿಡಿಕಾರಿದ್ದಾರೆ. ಈ ವೇಳೆ ಮದ್ಯಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್​ ಪರಿಸ್ಥಿತಿಯನ್ನೂ ತಿಳಿಗೊಳಿಸಿ ಶಾಸಕ ಹರೀಶ್​ಗೆ ತಮ್ಮ ಭಾಷಣವನ್ನೂ ಮುಂದುವರೆಸುವಂತೆ ಹೇಳಿದ್ದರು.

ಶಕ್ತಿ ಯೋಜನೆ ಜಾರಿ ಮಾಡಿದ ನಂತರ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಗ್ಯಾರಂಟಿ ಯೋಜನೆಗಳಲ್ಲಿ ಕೆಲವು ಲೋಪಗಳಿವೆ. ವಿರೋಧ ಪಕ್ಷದ ಶಾಸಕನಾಗಿ ಇದನ್ನೂ ಹೇಳುವುದೂ ನನ್ನ ಕರ್ತವ್ಯ. ರಾಜ್ಯದಲ್ಲಿ ಯಾವುದೇ ಸರ್ಕಾರವಿರಲಿ ಯೋಜನೆಗಳೂ ದುಷ್ಟರ ಪಾಲಾಗಬಾರದು. ಎಲ್ಲರೂ ಇದರ ಬಗ್ಗೆ ಗಮನಹರಿಸಬೇಕೂ ಎಂದು ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net