ರಾಜ್ಯ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆ ಅಂತಿಮ; ಸಂಭಾವ್ಯರ ಪಟ್ಟಿ ಹೀಗಿದೆ

CWC Meeting
Published on

ನವದೆಹಲಿ: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಕಾಂಗ್ರೆಸ್​ ಪಕ್ಷ ಕರ್ನಾಟಕದಲ್ಲಿ ಏಳು ಹುರಿಯಾಳುಗಳ ಹೆಸರನ್ನು ಘೋಷಿಸಿ 21 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ. ಈ ವಾರದಲ್ಲೇ ಕರ್ನಾಟಕದ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿದ್ದು, ಬುಧವಾರ ಸಂಜೆ ಮತ್ತೊಮ್ಮೆ ಸಭೆ ನಡೆಸಿ ಅಭ್ಯರ್ಥಿಗಳನ್ನು ಘೋಷಿಸುತ್ತಾರೆ ಎಂದು ತಿಳಿದು ಬರಲಿದೆ. ಈಗಾಗಲೇ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಲ್ಕು ಕ್ಷೇತ್ರಗಳಿಗೆ ಬಾಕಿ ಉಳಿಸಿಕೊಳ್ಳಲಾಗಿದೆ.

ಅದರಂತೆ ಚಾಮರಾಜನಗರ, ಬಳ್ಳಾರಿ, ಕಲಬುರ್ಗಿ ಹಾಗೂ ಕೋಲಾರ ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್​ ಈಗಾಗಲೇ ಅಂತಿಮವಾಗಿರುವ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಮಾರ್ಚ್​ 20ರಂದು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. ಅಂತಿಮ ಕ್ಷಣದಲ್ಲಿ ಒಂದೆರಡು ಬದಲಾವಣೆಯಾಗುವ ಸಾಧ್ಯತೆ ಇದೆ.

17 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಚಿತ್ರದುರ್ಗ - ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತ ಪಾಟೀಲ್, ಹುಬ್ಬಳ್ಳಿ- ವಿನೋದ್ ಅಸೂಟಿ, ದಾವಣಗೆರೆ - ಡಾ. ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ್ ಹಿಟ್ನಾಳ್, ಬೀದರ್ - ರಾಜಶೇಖರ್ ಪಾಟೀಲ್, ದಕ್ಷಿಣ ಕನ್ನಡ- ಪದ್ಮರಾಜ್, ಉಡುಪಿ-ಚಿಕ್ಕಮಗಳೂರು - ಜಯಪ್ರಕಾಶ್ ಹೆಗಡೆ, ಬೆಂಗಳೂರು ದಕ್ಷಿಣ - ಸೌಮ್ಯರೆಡ್ಡಿ, ಬೆಂಗಳೂರು ಸೆಂಟ್ರಲ್- ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ ರಾಜೀವ್ ಗೌಡ, ಮೈಸೂರು - ಎಂ. ಲಕ್ಷ್ಮಣ್, ರಾಯಚೂರು- ಕುಮಾರ್ ನಾಯ್ಕ್, ಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್, ಚಿಕ್ಕಬಳ್ಳಾಪುರ- ರಕ್ಷಾರಾಮಯ್ಯ ಹೆಸರು ಪಟ್ಟಿಯಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net