

ಹಾವೇರಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯಥಿರ್ಗಳಲ್ಲಿ ಸಾಮರಸ್ಯ ಇರಬೇಕು. ಕಾಂಗ್ರೆಸ್ ಪಕ್ಷ ಆಕಾಂಕ್ಷಿಗಳಿರುವ ಎಲ್ಲರಿಗೂ ಟಿಕೆಟ್ ಕೊಡೋದಿಲ್ಲ. ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅವರನ್ನು ಗೆಲ್ಲಿಸುವಂತಹ ಆತ್ಮಬಲ ಅಭ್ಯಥಿರ್ಗಳಲ್ಲಿ ಇರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ಸಜ್ಜನರ ಫಂಕ್ಷನ್ ಹಾಲ್ನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ವೋಟ್ ಚೋರ್ ಗದ್ದಿ ಚೋಡ್ ಸಹಿ ಸಂಗ್ರಹ ಅಭಿಯಾನ ಹಾಗೂ ಪಶ್ಚಿಮ ಪದವೀಧರ ಚುನಾವಣೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚುನಾವಣೆ ಸಮಯದಲ್ಲಿ ಪಕ್ಷದ ಹಿತದೃಷ್ಟಿ ಹಾಗೂ ಕಾರ್ಯಕರ್ತರ ಹಿತದೃಷ್ಟಿ ಬಹಳ ಮಹತ್ತರ ಪಾತ್ರ ವಹಿಸುತ್ತದೆ. ಜಿಲ್ಲೆಯಲ್ಲಿ ಆರೂ ಶಾಸಕರಿಗೆ ಅತಿ ಹೆಚ್ಚಿನ ಬಲವನ್ನು ಕಾಂಗ್ರೆಸ್ ಕಾರ್ಯಕರ್ತರು ಕೊಟ್ಟಿದ್ದಾರೆ. ಅಭ್ಯಥಿರ್ಗಳು, ಕಾರ್ಯಕರ್ತರು ಹುಮ್ಮಸ್ಸಿನಿಂದ ಶ್ರಮಿಸಿದ ಫಲವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ನ ಪ್ರತಿಸ್ಪದಿರ್ ಪಕ್ಷ ಬಿಜೆಪಿ ಅಭ್ಯಥಿರ್ಯನ್ನು ಸೋಲಿಸುವಂತಹ ವಾತಾವರಣ ನಮ್ಮಲ್ಲಿ ಬರಬೇಕು. ನಮ್ಮಲ್ಲಿರುವ ಅಭ್ಯಥಿರ್ಗಳು ತಮ್ಮತಮ್ಮಲ್ಲಿಯೇ ಚಚಿರ್ಸಿ ಒಮ್ಮತದ ಅಭ್ಯಥಿರ್ಯನ್ನು ಆಯ್ಕೆ ಮಾಡಿಕೊಳ್ಳಬೇಕು. ಹಾವೇರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಪದವೀಧರ ಮತದಾರರು ಇದ್ದಾರೆ.
ಅಭ್ಯಥಿರ್ಗಳು ಜಿಲ್ಲೆಯ ಎಲ್ಲ ಶಾಸಕರು, ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಾರ್ಯಕರ್ತ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಮರೆತು ಸಾಮರಸ್ಯ ಬೆಳೆಸಿಕೊಳ್ಳಬೇಕು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಕಾಂಗ್ರೆಸ್ ಅಭ್ಯಥಿರ್ ಗೆಲ್ಲಿಸಬಹುದು. ಈ ಚುನಾವಣೆ ಮುಗಿದ ಬಳಿಕ ಸ್ಥಳಿಯ ಸ್ಥಂಸೆಗಳು, ಎಪಿಎಂಸಿ ಚುನಾವಣೆ ಬರಲಿದೆ. ಕ್ರಿಯಾಶೀಲವಾಗಿ ಪಕ್ಷ ಸಂಘಟಿಸಲು ಶ್ರಮಿಸಿದ ಕಾರ್ಯಕರ್ತರಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ಕೊಡುತ್ತೇವೆ. ಉತ್ಸಾಹಿಗಳಾಗಿ ಕೆಲಸ ಮಾಡುವವರಿಗೆ ಒಳ್ಳೆಯ ಸ್ಥಾನಮಾನ ಕೊಡಿಸುತ್ತೇವೆ ಎಂದು ತಿಳಿಸಿದರು.
ಟಿಕೇಟ್ ಆಕಾಂಕ್ಷಿಗಳಾದ ರಾಘವೇಂದ್ರ ಬಾಸೂರ ಹಾಗೂ ರಾಜೇಶ್ವರಿ ಪಾಟೀಲ ಮಾತನಾಡಿ, ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರ ಪರವಾಗಿ ಕೆಲಸ ಮಾಡುತ್ತೇವೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯಥಿರ್ಯನ್ನು ಗೆಲ್ಲಿಸುತ್ತೇವೆಂದು ಹೇಳುತ್ತಾ, ಅರ್ಹ ಪದವೀಧರರು ನ. 6ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ ಸಂಬಂಸಿದ ಅಕಾರಿಗಳೊಂದಿಗೆ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.
ಬಸವರಾಜ ಗುರಿಕಾರ ಮಾತನಾಡಿದರು. ಶಾಸಕರಾದ ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ಯಾಸೀರ್ಖಾನ್ ಪಠಾಣ, ಮಾಜಿ ಶಾಸಕರಾದ ಬಿ.ಎಚ್. ಬನ್ನಿಕೋಡ, ನೆಹರು ಓಲೇಕಾರ, ಹಾವೇಮುಲ್ ಅಧ್ಯಕ್ಷ ಮಂಜನಗೌಡ ಪಾಟೀಲ, ಆನಂದಸ್ವಾಮಿ ಗಡ್ಡದೇವರಮಠ, ರಾಮಣ್ಣ ಲಮಾಣಿ, ಖಾಜಿ ವಕೀಲರ, ರುಕ್ಮಿಣಿ ಸಾಹುಕಾರ, ದುರಗಪ್ಪ ನೀರಲಗಿ, ಎಂ.ಎಂ. ಮೈದೂರ, ಎಸ್.ವಿ ಪಾಟೀಲ, ಮಹದೇವಗೌಡ ಗಾಜಿಗೌಡ್ರ, ದಾನಪ್ಪ ಕೆಂಗೊಂಡ, ಶಂಕರ ಮೆಹರವಾಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಪ್ರಸನ್ನ ಹಿರೇಮಠ ನಿರ್ವಹಿಸಿದರು.