ಪರಿಷತ್ ಚುನಾವಣೆ ತಯಾರಿಗೆ 12ರಂದು ಕೈ ಸಭೆ; ಮುಖಂಡರಿಗೆ ಎಚ್ಚರಿಕೆ ಸಂದೇಶ

BJP Congress
Published on

ಬೆಂಗಳೂರು: ಜೂನ್ 3ರಂದು ನಡೆಯುವ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ತಯಾರಿ ಸಂಬಂಧ ಕಾಂಗ್ರೆಸ್ ಮೇ 12ರ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯನ್ನು ಮುನ್ನೆಡೆಸಲಿದ್ದು, ಚುನಾವಣೆ ಕಾರ್ಯತಂತ್ರ ಕುರಿತು ಪಕ್ಷದ ಪದಾಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.

ಈ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಶಾಸಕರು, ಕ್ಷೇತ್ರವಾರು ನಿಯೋಜನೆಗೊಂಡ ಸಂಯೋಜಕರಿಗೆ ಆಹ್ವಾನ ನೀಡಲಾಗಿದೆ.

ಪ್ರತಿ ಬೂತ್ ಮಟ್ಟದಿಂದ ಹಿಡಿದು ಬ್ಲಾಕ್, ಜಿಲ್ಲಾ, ಚುನಾವಣಾ ಕ್ಷೇತ್ರದ ವರೆಗೆ ಸ್ಥಳೀಯ ನಾಯಕರು ಅಧಿಕೃತ ಅಭ್ಯರ್ಥಿ ಗೆಲುವಿಗೆ ಜವಾಬ್ದಾರರಾಗಿರುತ್ತಾರೆ. ಹಾಗೂ ಪ್ರತಿಯೊಬ್ಬ ನಾಯಕರು ತಮ್ಮ ಬೂತ್‌ಗಳಲ್ಲಿ ಹೆಚ್ಚಿನ ಮತವನ್ನು ಪಡೆಯುವಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪಕ್ಷದ ಯಾವುದೇ ಹುದ್ದೆ ಅಥವಾ ಚುನಾವಣೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ, ಇನ್ನಿತರ ಪ್ರಕ್ರಿಯೆಗಳಲ್ಲಿ ಇದನ್ನು ವಿಶೇಷ ಮಾನದಂಡವಾಗಿ ಪರಿಗಣಿಸಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net