ಕಾಂಗ್ರೆಸ್​ ಶಾಸಕಿ ಕಲಾವತಿ ಕರೊನಾಗೆ ಬಲಿ

mla kalavati
Published on

ಭೋಪಾಲ್: ಮಹಾಮಾರಿ ಕರೊನಾ ತಂದೊಡ್ಡುತ್ತಿರುವ ಸಾವು-ನೋವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶನಿವಾರ ಬೆಳಗಿನ ಜಾವ ಕಾಂಗ್ರೆಸ್​ ಶಾಸಕಿಯೊಬ್ಬರು ಕರೊನಾಗೆ ಬಲಿಯಾಗಿದ್ದಾರೆ.

ಕಲಾವತಿ ಭುರಿಯಾ(49) ಮೃತರು. ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆ ಜೋಬಟ್ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದ ಕಲಾವತಿಗೆ 12 ದಿನಗಳ ಹಿಂದೆ ಕರೊನಾ ಸೋಂಕು ತಗುಲಿತ್ತು. ಇಂದೋರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕಲಾವತಿ ಅವರು ಝಾಬುವಾ ಕ್ಷೇತ್ರದ ಶಾಸಕ ಕಾಂತಿಲಾಲ್ ಅವರ ಸೊಸೆ.

ಕಲಾವತಿಯ ಶ್ವಾಸಕೋಶದಲ್ಲಿ ಶೇ.70ಕ್ಕೂ ಹೆಚ್ಚು ಸೋಂಕು ಆವರಿಸಿತ್ತು. ತುರ್ತು ನಿಗಾಘಟಕದಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತಿದ್ದರೂ ಅವರ ಆರೋಗ್ಯದ ಸ್ಥಿತಿ ಹದಗೆಡುತ್ತಲೇ ಇತ್ತು ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ವಿವೇಕ್ ಜೋಶಿ ಹೇಳಿದ್ದಾರೆ.

ಇನ್ನು ಉತ್ತರ ಪ್ರದೇಶದ ಲಖನೌ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್(76) ಕೂಡ ಕರೊನಾಗೆ ಬಲಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net