

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆ.1ರಂದು ದಾಖಲಾಗಿದ್ದರು. ಶ್ವಾಸಕೋಶಕ್ಕೆ ಸೋಂಕು, ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನವೇ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿತ್ತು. ಮಂಗಳವಾರ ರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ 3.55ಕ್ಕೆ ಮೃತಪಟ್ಟಿದ್ದಾರೆ.
(ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ)