

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಬಂಧಿ ಎಸ್. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಸಚಿವ ಎ. ಮಂಜು ಪುತ್ರ ಡಾ. ಮಂಥರ್ ಗೌಡಗೂ ಟಿಕೆಟ್ ಸಿಕ್ಕಿದೆ.