

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಶಿವಸೇನಾ ನಾಯಕ (ಶಿಂಧೆ ಬಣ) ಸಂಜಯ್ ಗಾಯಕ್ವಾಡ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಸಂಜಯ್ ಗಾಯಕ್ವಾಡ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್, ನಾಗರಾಜ್ ಯಾದವ್, ಎಐಸಿಸಿ ಕಾರ್ಯದರ್ಶಿ ಬಿ.ಎಂ ಸಂದೀಪ್, ಸೂರಜ್ ಹೆಗ್ಡೆ, ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್, ಕೆಪಿಸಿಸಿ ಉಪಾಧ್ಯಕ್ಷರಾದ ನಾರಾಯಣ ಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಮುಳಗುಂದ್, ಜಿಲ್ಲಾಧ್ಯಕ್ಷರುಗಳಾದ ಹನುಮಂತರಾಯಪ್ಪ, ಅಬ್ದುಲ್ ವಾಜಿದ್, ಕೆ.ವಿ ಗೌತಮ್, ಮಂಜುನಾಥ್, ನಂದಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.