

ಮಂಡ್ಯ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು ಮಳವಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಶಾಸಕ ಶಾಸಕ ಪಿಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ.
ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸೋಕೆ ಲೋಕಾಯುಕ್ತ ಕೇಳಿದ್ದಾರೆ. ಆದ್ರೆ 8 ತಿಂಗಳಿಂದ ಹಾಗೇ ಕುಳಿತಿದ್ದಿಯಲ್ಲಪ್ಪ. ಮಹಾನ್ ಇಂಡಸ್ಟ್ರಿಯಲಿಸ್ಟ್ ನಿರಾಣೆದು 108 ಹಗರಣವಿದೆ. ಶಶಿಕಲಾ ಜೊಲ್ಲೆ ವಿಚಾರದಲ್ಲಿ ಜೊಲ್ಲು ಸುರಿಸಿಕೊಂಡು ಕುಳ್ತಿದ್ದೀಯಲ್ಲಪ್ಪ. ಘನವೆತ್ತ ರಾಜ್ಯಪಾಲ ನಿನಗೆ ತಾಕತ್ತಿದ್ದರೇ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿಕೊಡು. ನಮ್ಮ ಸಿದ್ದರಾಮಯ್ಯ ತಪ್ಪು ಮಾಡಿದ್ರೆ ಅವರ ಜೊತೆ ನಮಗು ಶಿಕ್ಷೆಕೊಡು. ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಹೇಡಿಗಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ 136 ಸೀಟು ಗೆದ್ರು ಎಂದು ಕುಮಾರಸ್ವಾಮಿಗೆ ಹೊಟ್ಟೆ ಕಿಚ್ಚು. ಗುಡು ಗುಡು ಎಂದು ಓಡೋಗಿ ಮೋದಿ ಕಾಲು ಕಟ್ಟಿಕೊಂಡು ಬಿಜೆಪಿ ಜೊತೆ ಸೇರಿದ್ದೀಯಾ. ಕುಮಾರಸ್ವಾಮಿ ನಿನಗೆ ಸಿದ್ದರಾಮಯ್ಯರ ಒಂದು ರೋಮವನ್ನೂ ಅಲುಗಾಡಿಸಲು ಆಗಲ್ಲ. ನಿಮ್ಮ ಮೋದಿ, ಅಮಿತ್ ಷಾ ಹೇಡಿ ರಾಜಕಾರಣ ಮಾಡ್ತಿದ್ದಾರೆ. ನಿಮ್ಮ ಆಡಳಿತ ನೋಡಿದ್ರೆ ನಿಮ್ಮದು ವಂಚನೆ, ದ್ರೋಹ, ಸ್ವಜನ ಪಕ್ಷಪಾತ ತುಂಬಿದೆ ಎಂದು ತಿಳಿಯುತ್ತೆ ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.