ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ

DVG Renukacharya
Published on

ದಾವಣಗೆರೆ: ಕಾಂಗ್ರೆಸ್ ಮುಖಂಡರ ಜತೆ ನನಗೆ ರಾಜಕೀಯ ಹೊರತಾದ ಉತ್ತಮ ಸ್ನೇಹವಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪ್ರೀತಿಯಿಂದ ನೀಡಿದ ಆಹ್ವಾನದ ಮೇರೆಗೆ ಅವರೊಂದಿಗೆ ಒಮ್ಮೆ ಮೈಸೂರಿಗೆ ಹೋಗಿದ್ದೆ.

ಸಿದ್ದರಾಮಯ್ಯ, ಡಿಕೆಶಿ ಅವರಿಗೆ ದೂರವಾಣಿ ಕರೆ ಮಾಡಿ ಸಮಯ ತೆಗೆದುಕೊಂಡು ಹೋಗಿ ಶುಭಾಶಯ ಕೋರಿದ್ದೆ ಎಂದರು.

ಆದರೆ, ನಾನು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೆ ಇಲ್ಲ, ಬಿಜೆಪಿಯಲ್ಲೇ ಇರುತ್ತೇನೆ. ರಾಜ್ಯ ಸುತ್ತಿ ಮತಗಳಾಗಿ ಪರಿವರ್ತನೆ ಮಾಡುವ ಶಕ್ತಿನನ್ನಲ್ಲಿದೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಪಕ್ಷವನ್ನು ಸದೃಢವಾಗಿ ಕಟ್ಟುತ್ತೇನೆ ಎಂದು ಹೇಳಿದರು.

ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಬಿಎಸ್‌ವೈ ಇಲ್ಲದೆ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದು ಹೊರಟವರಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸಿದರು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net