ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್! ರಾಜಸ್ಥಾನದಿಂದ ಸೋನಿಯಾ ಸ್ಪರ್ಧೆ

sonia gandhi
Published on

ನವದೆಹಲಿ: ರಾಜ್ಯಸಭೆಗೆ ದ್ವೈ ವಾರ್ಷಿಕ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನಾಲ್ಕು ರಾಜ್ಯಗಳ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಸೋನಿಯಾ ಗಾಂಧಿಯನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.

ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನುಸಿಂಘ್ವಿಗೆ, ಬಿಹಾರದಿಂದ ಡಾ. ಅಖಿಲೇಶ್​ ಪ್ರಸಾದ್ ಸಿಂಗ್ ಟಿಕೆಟ್ ನೀಡಲಾಗಿದೆ. ಮಹಾರಾಷ್ಟ್ರದಿಂದ ಚಂದ್ರಕಾಂತ್​ಗೆ ಹಂಡೋರೆಗೆ ಸ್ಪರ್ಧಿಸಿಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ.

ಮುಂಬರುವ ರಾಜ್ಯಸಭೆ ಚುನಾವಣೆಗೆ ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿನ ತನ್ನ 14 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿತ್ತು. ಕರ್ನಾಟಕದಿಂದ ನಾರಾಯಣಸಾ ಭಾಂಡಗೆ ಅವರನ್ನು ಬಿಜೆಪಿ ರಾಜ್ಯಸಭೆಗೆ ಕಣಕ್ಕಿಳಿಸಿದೆ. 15 ರಾಜ್ಯಗಳ 56 ಸ್ಥಾನಗಳಿಗೆ ಫೆ 27ರಂದು ಚುನಾವಣೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net