ಪರಿಷತ್​ ಉಪಚುನಾವಣೆ; ಕಾಂಗ್ರೆಸ್​ನಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​. ಬೋಸರಾಜು, ತಿಪ್ಪಣ್ಣಪ್ಪ ಕಣಕ್ಕೆ

congress lc bypoll Candidate list
Published on

ನವದೆಹಲಿ: ಕರ್ನಾಟಕ ರಾಜ್ಯ ವಿಧಾನಪರಿಷತ್​ ಉಪಚುನಾವಣೆಗೆ ಸಂಬಂಧಿಸಿದಂತೆ ತೆರವಾಗಿದ್ದ ಸ್ಥಾನಗಳಿಗೆ ಕಾಂಗ್ರೆಸ್​ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ.

ಸೋಮವಾರ ಸಂಜೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಕಾಂಗ್ರೆಸ್​ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್​ ಘೋಷಿಸಿದೆ.

ಅಥಣಿ ಶಾಸಕ ಲಕ್ಷ್ಮಣ್​ ಸವದಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಆರ್​.ಶಂಕರ್​ರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್​ ಚಿಂಚನಸೂರು ಅವರಿಂದ ತೆರವಾದ ಸ್ಥಾನಕ್ಕೆ ಸಚಿವ ಎನ್​.ಎಸ್​.ಬೋಸರಾಜು ಅವರನ್ನು ಆಯ್ಕೆ ಮಾಡಲಾಗಿದೆ.

congress lc bypoll Candidate list
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net