

ನವದೆಹಲಿ: ಯೋಗವನ್ನು ಭಾರತದ ಮೊಟ್ಟ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹೆಚ್ಚು ಜನಪ್ರಿಯಗೊಳಿಸಿದರು ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿ ಬಿಜೆಪಿಯಿಂದ ಟೀಕೆಗೆ ಗುರಿಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಎಐಸಿಸಿ ಯೋಗವನ್ನು ಜನಪ್ರಿಯಗೊಳಿಸುವಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನು ರಾಷ್ಟ್ರೀಯ ನೀತಿಯ ಭಾಗವಾಗಿಸಿದರು ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಮ್ಮ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮದಲ್ಲಿ ಪ್ರಾಚೀನ ಕಲೆ ಮತ್ತು ತತ್ವಶಾಸ್ತ್ರದ ಪ್ರಾಮುಖ್ಯತೆಯನ್ನು ನಾವು ಪ್ರಶಂಸಿಸೋಣ ಮತ್ತು ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳೋಣ.
ಯೋಗವನ್ನು ಜನಪ್ರಿಯಗೊಳಿಸುವಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನು ರಾಷ್ಟ್ರೀಯ ನೀತಿಯ ಭಾಗವಾಗಿಸಿದರು ಎಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಟ್ವೀಟ್ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು ಯೋಗವನ್ನು ಅಪಹಾಸ್ಯ ಮಾಡುತ್ತ ಬಂದಿರುವ ಕಾಂಗ್ರೆಸ್ ಇದೀಗ ಅದರ ಕ್ರೆಡಿಟ್ಅನ್ನು ಪಡೆಯಲು ಮುಂದಾಗಿದೆ. ಕಾಂಗ್ರೆಸ್ ಪಕ್ಷವೂ ಸಂಪೂರ್ಣ ತಯಾರಿಯೊಂದಿಗೆ ಬಂದಿದೆ. 2015ರ ನಂತರ ಯೋಗ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಆರಂಭಿಸಿದೆ. ಈ ವಿಚಾರವಾಗಿ ಮೊದಲು ಕಾಂಗ್ರೆಸ್ಸಿಗರು ಭಾರತೀಯರಿಗೆ ಧನ್ಯವಾದಗಳನ್ನು ತಿಳಿಸಲಿ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಅರತವನ್ನು ಪ್ರತಿನಿಧಿಸುತ್ತಿದ್ಧಾರೆ. ಇದು ದೇಶಕ್ಕೆ ಹೆಮ್ಮೆಯ ವಿಷಯವಾಗಿದ್ದು, ಕಾಂಗ್ರೆಸ್ ಮಾತ್ರ ಕುಟುಂಬ ರಾಜಕಾರಣದಿಂದ ಹೊರಬಾರದಿರುವುದು ದುರದೃಷ್ಟಕರ. ನೆಹರು ಇದನ್ನು ಹೆಚ್ಚು ಜನಪ್ರಿಯಗೊಳಿಸಿದರೂ ಎಂದು ಹೇಳುವ ಕಾಂಗ್ರೆಸ್ ನಾಯಕರು ಯಾರಾದರೂ ಯೋಗ ಮಾಡಿದ್ದೀರಾ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಪ್ರಶ್ನಿಸಿದ್ಧಾರೆ.