

ಮಂಗಳೂರು : ಭಾರತ ಸೇವಾದಳ ವತಿಯಿಂದ ನಗರದ ಪಾಂಡೇಶ್ವರದಲ್ಲಿರುವ ನೆಹರು ಪಾರ್ಕ್‌ನಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮಂಗಳೂರು ತಾಲೂಕು ಸೇವಾದಳ ಅಧ್ಯಕ್ಷ ಪ್ರಭಾಕರ ಶ್ರೀಯಾನ್ ಮಾತನಾಡಿ ದೇಶದ ಭವಿಷ್ಯದಲ್ಲಿ ಮಕ್ಕಳ ಪಾತ್ರ ಮಹತ್ವ. ಮಕ್ಕಳು ವಿದ್ಯಾವಂತರಾಗಬೇಕು. ಶಿಕ್ಷಣದ ಮೂಲಕ ದೇಶದ ಭವಿಷ್ಯ ರೂಪಿಸಬಹುದು. ಇದಕ್ಕೋಸ್ಕರ ನೆಹರೂ ಅವರು ಅನೇಕ ವಿದ್ಯಾ ಸಂಸ್ಥೆಗಳನ್ನು ಹುಟ್ಟು ಹಾಕಿದ್ದರು.ಮಕ್ಕಳು ವಿದ್ಯಾವಂತರಾಗಿ ದೇಶವನ್ನು ಮುನ್ನೆಡೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಸೇವಾದಳ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ ಅವರು ನೆಹರು ಪ್ರತಿಮೆಗೆ ಪುಷ್ಪಾರ್ಚನೆಗೈದರು. ಸೇವಾದಳ ಜಿಲ್ಲಾ ಕಾರ್ಯದರ್ಶಿ ಟಿ. ಕೆ. ಸುಧೀರ್, ಜಿಲ್ಲಾ ಸಂಘಟಕ ಮಂಜೇಗೌಡ, ಪದಾಧಿಕಾರಿಗಳಾದ ಉದಯ್ ಕುಂದರ್, ಪ್ರೇಮ್ಚಂದ್, ಕೃತಿನ್ ಕುಮಾರ್, ಸುನಿಲ್ ದೇವಾಡಿಗ, ಬೆಂಗ್ರೆ ಸರ್ಕಾರಿ ಶಾಲೆ ಅಧ್ಯಕ್ಷ ರಾಕೇಶ್, ಶಿಕ್ಷಕಿಯರಾದ ಹರಿಣಾಕ್ಷಿ, ಸುಮಾ ಮತ್ತು ನಗರದ ಬೆಂಗ್ರೆ ಸರ್ಕಾರಿ ಶಾಲೆ ಮತ್ತು ಮುಲ್ಲಕಾಡು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.