

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿದ್ದ ಬಿಜೆಪಿ, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಲೇವಡಿಯಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ ಜಾತ್ಯಾತೀತತೆಯನ್ನು ವಿಸರ್ಜಿಸಲು ಹೊರಟಿದ್ದಾರೆ ಎಂದು ಟೀಕಿಸಿದೆ.
ಜನತಾದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು. ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ ಜಾತ್ಯಾತೀತತೆಯನ್ನು ವಿಸರ್ಜಿಸಲು ಹೊರಟಿದ್ದಾರೆ. ಇತ್ತ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ.
ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ. ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ ಎಂದು ರಾಜ್ಯ ಕಾಂಗ್ರೆಸ್ ಘಟಕೆ ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದೆ.