ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ: ರಾಜ್ಯ ಕಾಂಗ್ರೆಸ್

bitcoin
Published on

ಬೆಂಗಳೂರು: ಬಿಟ್​ ಕಾಯಿನ್ ಹಗರಣ (Bit Coin Scam) ಕುರಿತು ಬಿಜೆಪಿ ಮತ್ತು ರಾಜ್ಯ ಕಾಂಗ್ರೆಸ್ ವಿರುದ್ಧ ಟ್ವೀಟ್ (Tweet) ಸಮರ ಆರಂಭವಾಗಿದ್ದು, ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ ಎಂದು ಕಾಂಗ್ರೆಸ್ (Congress) ಟ್ವೀಟ್​​ ಮಾಡಿದೆ.

"ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಾಗ ಬಿಜೆಪಿ ಸರ್ಕಾರ ಪ್ರಕರಣ ಮುಚ್ಚಿಹಾಕಲು ಸರ್ವ ಪ್ರಯತ್ನಗಳನ್ನೂ ಮಾಡಿತ್ತು. ಹಗರಣವನ್ನು ಮುಚ್ಚಿಹಾಕಲು ಯಶಸ್ವಿಯೂ ಆಗಿತ್ತು, ಈಗ ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ. ಅಂದಹಾಗೆ

ನಳೀನ್ ಕುಮಾರ್ ಕಟೀಲ್ (Nalin Kumar Kateel) ಅವರು ಕುಳಿತಲ್ಲಿಯೇ ಬೆವರುತ್ತಿದ್ದಾರಂತೆ, ಏಕೆ ಬಿಜೆಪಿ?" ಎಂದು ಟ್ವೀಟ್ ಮಾಡಿದೆ.

ಮತ್ತೊಂದು ಟ್ವೀಟ್​​ನಲ್ಲಿ, "ತೊಗರಿ, ಟೊಮೊಟೊ ಮುಂತಾದವುಗಳ ಬೆಲೆ ದೇಶೀಯ ಮಟ್ಟದಲ್ಲಿ ಏರಿಕೆಯಾಗಿದೆ. ಹಿಂದೆ ತಾವು ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಎನ್ನುವವರು ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಬಿಜೆಪಿ ನಾಯಕರಿಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದೆಯೇ?, ಜನರಿಗೆ ಉದ್ಯೋಗ ನೀಡದೆ ಬೆಲೆ ಏರಿಕೆಯ ಮೂಲಕ ಹಗಲು ದರೋಡೆಗಿಳಿದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರ ಪ್ರತಿಭಟನೆ ಯಾವಾಗ?" ಎಂದು ಟ್ವೀಟ್ ಮೂಲಕ ಬಿಜೆಪಿಯನ್ನು ಟೀಕಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net