

ಬೆಂಗಳೂರು: SC-ST ಮೀಸಲಾತಿಯಲ್ಲಿ ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರು ಶುಕ್ರವಾರ ರಾಜಭವನ ಚಲೋ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದರು. ಕೆಪಿಸಿಸಿ ಕಚೇರಿಯಿಂದ ಶುರುವಾದ ಪಾದಯಾತ್ರೆಯನ್ನ ಮಾರ್ಗ ಮಧ್ಯೆ ತಡೆದ ಪೊಲೀಸರು ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ.
SC-ST ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9ನೇ ಪರಿಚ್ಛೇದ ಸೇರ್ಪಡೆ ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆಗಳನ್ನ ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇದನ್ನು ಓದಿ: ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ: ರೇಣುಕಾ ಚೌಧರಿ
ಇದನ್ನು ಓದಿ: ಕಾಂಗ್ರೆಸ್ ಶಾಸಕರ ಅಭಿಮಾನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ದು ಯಾಕೆ?