ಸ್ಥಳೀಯ ಸಂಸ್ಥೆ ಚುನಾವಣೆಗೆ ಕೈ ತಾಲೀಮು ಶುರು

congress logo
Published on

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೆಪ ಹೇಳದೇ ಚುನಾವಣೆ ನಡೆಸಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿರುವ ಸರ್ಕಾರ ತೆರೆಮರೆಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ತಾಲೀಮು ಕೂಡ ಶುರುಮಾಡಿದೆ.
ಜೂನ್ 1ರಂದು ಪಕ್ಷದ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ಕರೆದಿದೆ. ಪಕ್ಷ ಸಂಘಟನೆ ಬಲವರ್ಧನೆ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಅವಲೋಕನ ಮತ್ತು ಮುಂಬರುವ ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಳ ಪೂರ್ವ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಾಧ್ಯಕ್ಷರು ಉಪಸ್ಥಿತರಿರುವರು. ಪದಾಧಿಕಾರಿಗಳು, ಮುಂಚೂಣಿ ಘಟಕ, ವಿಭಾಗ, ಕೋಶಗಳ ರಾಜ್ಯ ಅಧ್ಯಕ್ಷರು ತಪ್ಪದೇ ಸಭೆಯಲ್ಲಿ ಹಾಜರಿರುವಂತೆ ಸೂಚನೆ ಕಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net