ಒಳಮೀಸಲಾತಿಗೆ ಕೈಹಾಕಿದ್ರೆ ಕಾಂಗ್ರೆಸ್ಸಿಗೂ ಸಂಕಷ್ಟ

kallesh naik
ಗೋರ ಸೇನಾ ಜಿಲ್ಲಾಧ್ಯಕ್ಷ ಕೆ.ಕಲ್ಲೇಶ್ ನಾಯ್ಕ
Published on

ಶಿವಮೊಗ್ಗ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಗೆ ಕಾಂಗ್ರೆಸ್ ಸರ್ಕಾರ ಮರುಜೀವ ನೀಡಬಾರದೆಂದು ಗೋರ ಸೇನಾ ಜಿಲ್ಲಾಧ್ಯಕ್ಷ ಕೆ.ಕಲ್ಲೇಶ್ ನಾಯ್ಕ ಆಗ್ರಹಿಸಿದರು.

ಬಿಜೆಪಿ ಸರ್ಕಾರ ಸಂವಿಧಾನದಲ್ಲಿ ಅವಕಾಶವಿಲ್ಲದ ಹಾಗೂ ಹೈಕೋರ್ಟ್‌ನಲ್ಲಿ ಬಾಕಿ ಇರುವ ಒಳಮೀಸಲಾತಿ ಪ್ರಕರಣಕ್ಕೆ ಕೈಹಾಕಿ ಅಧಿಕಾರ ಕಳೆದುಕೊಂಡಿದೆ. ಈಗಿನ ಸರ್ಕಾರ ಕೈಹಾಕಿದರೆ ಮುಂಬರುವ ಲೋಕಸಭಾ, ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ತಿಳಿಯಲು ಅಂದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ನೇತೃತ್ವದಲ್ಲಿ ಜಾತಿಗಳ ಸಮೀಕ್ಷೆ ಮಾಡಿಸಿದ್ದು ಈ ವರದಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಜಾತಿಗಣತಿ ಪ್ರತಿ 10 ವರ್ಷಗಳಿಗೊಮ್ಮೆ ನಡೆಯಲಿದ್ದು, ಕೇಂದ್ರದ ಯುಪಿಎ ಸರ್ಕಾರದಲ್ಲಿ ಜಾತಿ ಗಣತಿ ನಡೆದಿದೆ. ಆದರೆ ಆ ವರದಿ ಇನ್ನೂ ಬಿಡುಗಡೆಯಾಗಿಲ್ಲ. ಈ ನಡುವೆ ಸದಾಶಿವ ಆಯೋಗದ ಹಿನ್ನೆಲೆ ತಿಳಿಯದೆ ರಾಜಕೀಯ ಕಾರಣಗಳಿಗಾಗಿ ಮುಗ್ಧ ಜನರನ್ನು ಒಬ್ಬರ ವಿರುದ್ಧ ಮತ್ತೊಬ್ಬರನ್ನು ಪ್ರಚೋದನೆ ಮಾಡಿ ರಾಜ್ಯದಲ್ಲಿ ದಲಿತರ ಐಕ್ಯತೆಗೆ ಭಂಗ ತಂದಿರುವ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಸೇನಾ ಜಿಲ್ಲಾ ಉಪಾಧ್ಯಕ್ಷ ರಾಜೇಶ್, ಪ್ರಧಾನ ಕಾರ್ಯದರ್ಶಿ ಜಿ.ಚಂದ್ರನಾಯ್ಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net