

ವಾರಣಾಸಿ: ಇಂದು ಮೂರನೇ ಬಾರಿಗೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಸಹ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗುರಿ ಕುರಿತು ಮಾತನಾಡಿದ ಪ್ರಧಾನಿ, "ಮುಂಬರುವ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ" ಎಂದು ಹೇಳಿದರು.
ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿ, ನಂತರವೇ ನಾಮೀನೇಷನ್ನತ್ತ ಹೆಜ್ಜೆ ಹಾಕಿದರು. ಮೋದಿ ಅವರ ನಾಮಪತ್ರ ಸಲ್ಲಿಕೆಗೆ 12 ರಾಜ್ಯಗಳ ಸಿಎಂ ಪಾಲ್ಗೊಂಡಿದ್ದು ಮತ್ತಷ್ಟು ವಿಶೇಷ,(ಏಜೆನ್ಸೀಸ್).