

ಬೆಂಗಳೂರು: ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದೆ. ಪುಷ್ಪಾ ಅಮರನಾಥ್ರನ್ನು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೂ ಮಾಹಿತಿ ನೀಡದೆ ಮಹಿಳಾ ಘಟಕಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪುಷ್ಪಾ ಅಮರನಾಥ್ರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.