VIDEO | ಡೆಂಗ್ಯೂ ಪ್ರಕರಣ ಹೆಚ್ಚಳ; ಸೊಳ್ಳೆ ಪರದೆ ಹಿಡಿದು​ ಪ್ರತಿಭಟಿಸಿದ ಕಾಂಗ್ರೆಸ್​ ಕಾರ್ಯಕರ್ತರು

Untitled design - 2023-09-25T192754.444
Published on

ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ಡೆಂಗ್ಯೂ ಪ್ರಕರಣಗಳು ತೀವ್ರ ಏರಿಕೆಯಾದ ಬೆನ್ನಲ್ಲೇ ಕಾಂಗ್ರೆಸ್​ ಕಾರ್ಯಕರ್ತರು ನಗರದ ಮುಖ್ಯ ರಸ್ತೆಗಳಲ್ಲಿ ಸೊಳ್ಳೆ ಪರದೆ ಹಿಡಿದು ಪ್ರತಿಭಟನೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಕೋಲ್ಕತ್ತಾದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಕಂಡುಬರುತ್ತಿರುವ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಜಾದವ್‌ಪುರ ಪ್ರದೇಶದ 12 ವರ್ಷದ ಬಾಲಕಿ ಡೆಂಗ್ಯೂ ಪಾಸಿಟಿವ್​ಗೆ ಒಳಗಾದ ಬೆನ್ನಲ್ಲೇ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

'ಸುರಕ್ಷಿತ ಮನೆ' ಎಂಬ ನಾಮಫಲಕಗಳ ಜತೆಗೆ ಸೊಳ್ಳೆ ಪರದೆಗಳನ್ನು ಹಿಡಿದು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಇದರ ವಿಡಿಯೋ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net