ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ ಒಮ್ಮತದ ಪುನರಾಯ್ಕೆ; ನಾಳೆ ಅಧಿಕೃತ ಘೋಷಣೆ

hd devegowda
Published on

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಇಂದು (ಅ.27) ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ನಿರ್ಧಾರದೊಂದಿಗೆ ದೇವೇಗೌಡರು ಪುನರಾಯ್ಕೆಯಾಗಿದ್ದಾರೆ. 

ಮಾಜಿ ಸಚಿವರು, ಹಾಲಿ ಶಾಸಕರು ಸೇರಿದಂತೆ 13 ರಾಜ್ಯಗಳ ವಿವಿಧ ಪ್ರತಿನಿಧಿಗಳು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಎಲ್ಲರೂ ದೇವೇಗೌಡರ ಹೆಸರನ್ನು ಒಮ್ಮತದಿಂದಲೇ ಸೂಚಿಸಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ದೇವೇಗೌಡ ಅವರ ಅನಾರೋಗ್ಯದ ಹಿನ್ನೆಲೆ, ಬೇರೆಯವರು ಆಯ್ಕೆಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಇದೀಗ ಮತ್ತೊಂದು ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ ಅವರೇ ಪಕ್ಷವನ್ನು ಮುನ್ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net