ಸಂವಿಧಾನ ಜಾಗೃತಿಗಾಗಿ ಪಂಜಿನ ಮೆರವಣಿಗೆ

panjina meravanige
ಸಂವಿಧಾನ ಜಾಗೃತಿ ಜಾಥಾ ಹಿನ್ನೆಲೆಯಲ್ಲಿ ತರೀಕೆರೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು.
Published on

ತರೀಕೆರೆ: ಸಂವಿಧಾನ ಜಾಗೃತಿ ಜಾಥಾ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶುಕ್ರವಾರ ಪಂಜಿನ ಮೆರವಣಿಗೆ ನಡೆಯಿತು. ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾದ ಪಂಜಿನ ಮೆವಣಿಗೆಗೆ ಎಸಿ ಡಾ. ಕೆ.ಜೆ.ಕಾಂತರಾಜ್ ಪಟ್ಟಣದ ಮಿನಿ ವಿಧಾನಸೌಧ ಆವರಣದ ಡಾ. ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ಮಹಾತ್ಮ ಗಾಂಧಿ ವೃತ್ತ ಸೇರಿ ಪ್ರಮುಖ ರಸ್ತೆಯಲ್ಲಿ ಜರುಗಿದ ಪಂಜಿನ ಮೆರವಣಿಗೆಯಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಾಯಿತು. ತಹಸೀಲ್ದಾರ್ ವಿ.ಎಸ್.ರಾಜೀವ್, ಪುರಸಭೆ ಅಧ್ಯಕ್ಷ ಪರಮೇಶ, ಮುಖ್ಯಾಧಿಕಾರಿ ಎಚ್.ಪ್ರಶಾಂತ್, ವಕೀಲ ಎಸ್.ಸುರೇಶ್‌ಚಂದ್ರ ಸೇರಿ ವಿವಿಧ ವಸತಿ ಶಾಲೆ ಮಕ್ಕಳು, ದಲಿತಪರ ಸಂಘಟನೆ ಪದಾಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net