ರೇಣುಕಾ ಯಲ್ಲಮ್ಮ ದೇವಿ ದೇಗುಲಕ್ಕೆ ತಡೆಗೋಡೆ ನಿರ್ಮಾಣ

IMG-20250204-WA0199
ಅರಸೀಕೆರೆಯಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ರೇಣುಕಾ ಯಲ್ಲಮ ದೇವಿಗೆ ಮುಖಂಡರು ಪುಷ್ಪಾರ್ಚನೆ ಮಾಡಿದರು. ಸಮೀವುಲ್ಲಾ, ಅರುಣ್ ಕುಮಾರ್, ಮನೋಹರ್, ದರ್ಶನ್, ಹರೀಶ್ ಇತರರಿದ್ದರು.
Published on

ಅರಸೀಕೆರೆ : ಸವಿತ ಸಮಾಜದ ಏಳಿಗೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಾಲೂಕು ಸವಿತ ಸಮಾಜದ ನೂತನ ಅಧ್ಯಕ್ಷ ಅರುಣ್ ಕುಮಾರ್ ಹೇಳಿದರು.

ನಗರದ ರೇಣುಕಾ ಯಲ್ಲಮ್ಮ ದೇವಿ ದೇಗುಲದ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜಾತಿ, ವರ್ಣ,ಲಿಂಗ ತಾರತಮ್ಯವಿಲ್ಲದೇ ಶತಮಾನಗಳಿಂದಲೂ ಕಾಯಕ ಮುಂದುವರಿಸಿಕೊಂಡು ಬಂದಿದ್ದೇವೆ. ಮುಂಬರುವ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ದೇಗುಲಕ್ಕೆ ಅಗತ್ಯವಿರುವ ಜಾಗ ಪಡೆಯುವ ಜತೆಗೆ ತಡೆಗೋಡೆ ನಿರ್ಮಿಸುವ ಉದ್ದೇಶವಿದೆ ಎಂದರು.

ನಗರಸಭೆ ಅಧ್ಯಕ್ಷ ಸಮೀವುಲ್ಲಾ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಸವಿತಾ ಸಮಾಜ ಅವಕಾಶ ಪಡೆಯಬೇಕು. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸೇವಾ ಕ್ಷೇತ್ರ ತನ್ನ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿದೆ. ಸವಿತ ಮಹರ್ಷಿ ಹಾಕಿ ಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕಿದೆ. ಪುಣ್ಯ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇಗುಲದ ಅಭಿವೃದ್ಧಿಗೆ ನಗರಸಭೆ ವತಿಯಿಂದ ಅಗತ್ಯ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಉಪಾಧ್ಯಕ್ಷ ಮನೋಹರ್, ಸದಸ್ಯರಾದ ದರ್ಶನ್, ಮುಖಂಡರಾದ ಹರೀಶ್, ವಿಜಯ್‌ಕುಮಾರ್, ಮಂಜುನಾಥ್, ನಾರಾಯಣಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net