ವರ್ಷದೊಳಗೆ ಶಾಲಾ ಕೊಠಡಿಗಳ ನಿರ್ಮಾಣ

sgr egg
ಸಾಗರದಲ್ಲಿ ಆಯೋಜಿಸಿದ್ದ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಗೋಪಾಲಕೃಷ್ಣ ಬೇಳೂರು, ಎನ್.ಹೇಮಂತ್, ಯತೀಶ್ ಆರ್, ಕೆ.ಆರ್.ಬಿಂಬಾ, ಗುರುಕೃಷ್ಣ ಶೆಣೈ, ಎಚ್.ಕೆ.ನಾಗಪ್ಪ ಇತರರಿದ್ದರು.
Published on

ಸಾಗರ: ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಅದರಲ್ಲಿಯೂ ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಯಶಸ್ವಿಯಾಗಿ ಮುನ್ನಡೆದಿದೆ. ಈ ಯೋಜನೆಯಡಿ ಶಾಲಾಭಿವೃದ್ಧಿಗೆ ದೇಣಿಗೆ ಹರಿದುಬರುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರ ನಗರಸಭೆ ರಂಗಮಂದಿರದಲ್ಲಿ ಮಂಗಳವಾರ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಳೆಯ ವಿದ್ಯಾರ್ಥಿಗಳ ಸಂಘದ ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿ ತನ್ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಅಜೀಂ ಪ್ರೇಮ್ ಜೀ ನಮ್ಮ ಸರ್ಕಾರದ ಮೇಲೆ ಭರವಸೆ ಇರಿಸಿ 1591 ಕೋಟಿ ರೂ. ವೆಚ್ಚದಲ್ಲಿ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ನೀಡಲು ಸಹಕಾರ ನೀಡಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು 1,200 ಕೋಟಿ ರೂ. ಮೀಸಲಿಡಲಾಗಿದೆ. ವಿಪರೀತ ಮಳೆಯಿಂದಾಗಿ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಸೊರಬ, ಹೊಸನಗರ ಮುಂತಾದ ಕಡೆಗಳಲ್ಲಿ ಶಾಲಾ ಕಟ್ಟಡಗಳು ಹಾನಿಗೀಡಾಗಿವೆ. ವರ್ಷದೊಳಗೆ ಹೊಸದಾಗಿ ಕೊಠಡಿಗಳನ್ನು ಕಟ್ಟಲು ವಿಶೇಷ ಅನುದಾನ ನೀಡುವ ಚಿಂತನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಶಿಕ್ಷಣದಲ್ಲಿ ಕ್ರಾಂತಿ ಆಗಬೇಕಾದರೆ ದೊಡ್ಡದೊಡ್ಡ ಕಂಪನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಸರ್ಕಾರಿ ಶಾಲೆಗಳ ಬಗ್ಗೆ ನಿರಾಸಕ್ತಿ ತೋರದೆ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಉತ್ತಮ ಲಿತಾಂಶ ತರಬೇಕು ಎಂದರು.
ಜಿಪಂ ಸಿಇಒ ಎನ್.ಹೇಮಂತ್, ಎಸಿ ಯತೀಶ್, ಶಿಕ್ಷಣ ಇಲಾಖೆಯ ಕೆ.ಆರ್.ಬಿಂಬಾ, ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್, ತಾಪಂ ಇಒ ಗುರುಕೃಷ್ಣ ಶೆಣೈ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಭೂಮೇಶ್, ಬಿಇಒ ಪರಶುರಾಮಪ್ಪ, ಅನ್ಸರ್ ಆಲಿ ಬೇಗ್, ಡಾ. ಅನ್ನಪೂರ್ಣಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net