ಹೊನ್ನೂರು ಗ್ರಾಪಂನಿಂದ ಶಾಲೆಗೆ ಶೌಚಗೃಹ ನಿರ್ಮಾಣ

Oplus_0
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಗೃಹವನ್ನು ಗ್ರಾಪಂ ಅಧ್ಯಕ್ಷ ಎಂ.ಗುರುಪ್ರಸಾದ್ ಶುಕ್ರವಾರ ಉದ್ಘಾಟಿಸಿದರು. ಸದಸ್ಯ ಆರ್.ಪುಟ್ಟಬಸವಯ್ಯ ಸೇರಿದಂತೆ ಅನೇಕರು ಇದ್ದರು.
Published on

ಯಳಂದೂರು: ಹೊನ್ನೂರು ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೌಚಗೃಹವನ್ನು ನಿರ್ಮಾಣ ಮಾಡಿದ್ದು ಶುಕ್ರವಾರ ಗ್ರಾಪಂ ಅಧ್ಯಕ್ಷ ಎಂ. ಗುರುಪ್ರಸಾದ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು 2022-23ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 4.30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಶೌಚಗೃಹವನ್ನು ನಿರ್ಮಾಣ ಮಾಡಲಾಗಿದೆ. ಈ ಶಾಲೆಯಲ್ಲಿ ಶೌಚಗೃಹ ಬೇಕೆಂದು ಇಲ್ಲಿನ ಶಿಕ್ಷಕರು ಮನವಿ ಸಲ್ಲಿಸಿದ್ದರು. ಹಾಗಾಗಿ ಇದು ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇದರ ನಿರ್ಮಾಣ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ನರೇಗಾ ಯೋಜನೆಯಿಂದ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಕಾಮಗಾರಿಗಳು ನಡೆದಿವೆ. ಈ ಸಾಲಿನಲ್ಲಿ 2.89 ಕೋಟಿ ರೂ. ಕಾಮಗಾರಿಯನ್ನು ಮಾಡಲಾಗಿದೆ. ಜನರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಇಂತಹ ಕಾಮಗಾರಿಗಳಿಗೆ ಹೆಚ್ಚಿನ ಅದ್ಯತೆಯನ್ನು ನೀಡಲಾಗುವುದು. ಪಂಚಾಯಿತಿಯ ಮೂಲ ಸಮಸ್ಯೆಗಳ ನಿವಾರಣೆಗೆ ಕ್ರಮವಹಿಸಲಾಗುವುದು. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಉಪಾಧ್ಯಕ್ಷೆ ನೇತ್ರಾವತಿ ಸದಸ್ಯರಾದ ಆರ್.ಪುಟ್ಟಬಸವಯ್ಯ, ಇಂದಿರಾ, ಎಚ್.ಕೆ.ಶಿವಪ್ರಕಾಶ್, ಎ.ನಾಗರತ್ನಮ್ಮ, ಜಿ. ಅನಿತನಿರಂಜನ್, ಜಯಮ್ಮ, ಭಾಗ್ಯಮ್ಮ, ಟಿ.ಎನ್.ರಾಧಾ, ರಾಧ, ಎಚ್.ಆರ್.ಕುಮಾರ್, ಪಿಡಿಒ ನಿರಂಜನ್‌ಕುಮಾರ್ ಮುಖ್ಯಶಿಕ್ಷಕ ಶಿವಮಾದಯ್ಯ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net