

ಬೆಂಗಳೂರು :ಮಾಗಡಿ ರಸ್ತೆಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ 2 ಎಕರೆ ಪ್ರದೇಶದಲ್ಲಿ ಮಹರ್ಷಿ ವಾಲ್ಮೀಕಿ ಸೌಧ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಲಭಿಸಿದೆ.
ಪರಿಶಿಷ್ಟ ಪಂಗಡಗಳ ನಿರ್ದೇಶನಾಲಯ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಗಳಿಗೆ ಮಹರ್ಷಿ ವಾಲ್ಮೀಕಿ ಸೌಧ ನಿರ್ಮಾಣ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸೇರಿದ ಸಜ್ಜೇಪಾಳ್ಯ ಗ್ರಾಮದಲ್ಲಿ 2 ಎಕರೆ ಜಮೀನನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ 30 ವರ್ಷಗಳಿಗೆ ಗುತ್ತಿಗೆ ಆಧಾರದ ಮೇಲೆ ಪ್ರತಿ ವರ್ಷ ಪ್ರತಿ ಎಕರೆಗೆ 1 ಲಕ್ಷ ರೂ. ನೀಡುವ ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ. 5 ವರ್ಷದೊಳಗೆ ಪ್ರಸ್ತಾಪಿತ ಕಟ್ಟಡವನ್ನು ನಿರ್ಮಾಣ ಮಾಡಬೇಕು. ಒಂದು ವೇಳೆ ಕಟ್ಟಡ ನಿರ್ಮಾಣ ಮಾಡದೇ ಇದ್ದಲ್ಲಿ, ನಿರಾಶ್ರಿತರ ಪರಿಹಾರ ಕೇಂದ್ರ ಗುತ್ತಿಗೆಯನ್ನು ರದ್ದುಪಡಿಸಿ, ವಾಪಸ್ ಪಡೆಯುವ ಅಧಿಕಾರ ಹೊಂದಿದೆ ಎಂದು ಷರತ್ತು ವಿಧಿಸಲಾಗಿದೆ.
ಸುಸಜ್ಜಿತ ಆಸ್ಪತ್ರೆ ನಿರ್ಮಾಣ
ಯಲಹಂಕದ ಬೆಳ್ಳಹಳ್ಳಿಯಲ್ಲಿ 5 ಎಕರೆ ಜಮೀನಿನಲ್ಲಿ 50 ಕೋಟಿ ರೂ.ನಲ್ಲಿ ಮತ್ತು ಹೆಬ್ಬಾಳದ ಪಶುಸಂಗೋಪನೆ ಮತ್ತು ಕೃಷಿ ಇಲಾಖೆ ಆವರಣದಲ್ಲಿ 50 ಕೋಟಿ ರೂ. ಮೊತ್ತದಲ್ಲಿ ಪ್ರತ್ಯೇಕವಾಗಿ 100 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಸರ್ಕಾರ ಒಪ್ಪಿಗೆ ನೀಡಿದೆ.
ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಆತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸುವ ಬದಲಾಗಿ ಸರ್ಕಾರದ ಈ ಎರಡು ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ಒಪ್ಪಿಗೆ