ಕನ್‌ಸ್ಟ್ರಕ್ಷನ್ಸ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಪ್ರತಿಭಟನೆ

Construction Workers Central Union
ಡಿಸಿ ಕಚೇರಿ ಎದುರು ಸ್ಟೇಟ್ ಕನ್‌ಸ್ಟ್ರಕ್ಷನ್ಸ್ ವರ್ಕರ್ಸ್ ಸೆಂಟ್ರಲ್ ಯೂನಿಯನ್‌ನ ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನುನಿಲ್ಲಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಕರ್ನಾಟಕ ಬಂದ್‌ಗೆ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ಸ್ ವರ್ಕರ್ಸ್ ಸೆಂಟ್ರಲ್ ಯೂನಿಯನ್‌ನ ಜಿಲ್ಲಾ ಸಮಿತಿ ಪದಾಧಿಕಾರಿಗಳು ಶುಕ್ರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕದ ಹಲವು ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಆಗಿದೆ. ಆದರೂ ರಾಜ್ಯ ಸರ್ಕಾರ ಇಲ್ಲಿನ ರೈತರ ಬಗ್ಗೆ ಚಿಂತಿಸದೇ ಕೆಆರ್‌ಎಸ್ ಜಲಾಶಯದಿಂದ ಪ್ರತಿನಿತ್ಯ ನೀರು ಹರಿಸುತ್ತಿರುವುದು ವಿಷಾದನೀಯವಾಗಿದೆ ಎಂದು ದೂರಿದರು.
ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಸುಬ್ರಮಣಿ, ಗ್ರಾಮಾಂತರ ಅಧ್ಯಕ್ಷ ಕೆ.ಸಂಜಯಕುಮಾರ್, ಕಾರ್ಯಾಧ್ಯಕ್ಷ ಕೆ.ಸುಂದರಬಾಬು, ಕಾರ್ಯದರ್ಶಿ ಆರ್ಮುಗಂ, ಉಪಾಧ್ಯಕ್ಷ ಡಿ.ಮಣಿಕಂಠ, ಸಂಘಟನಾ ಕಾರ್ಯದರ್ಶಿ ಸೆಲ್ವರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net