

ರಾಣೆಬೆನ್ನೂರ: ಗ್ರಾಹಕರು ತಾವು ಖರೀದಿಸುವ ಪ್ರತಿಯೊಂದು ವಸ್ತುಗಳಿಗೂ ರಸೀದಿ ಪಡೆದುಕೊಳ್ಳಬೇಕು. ಇದರಿಂದ ಯಾವುದೇ ವಸ್ತು ಖರೀದಿಸಿದಾಗ ಮೋಸ ಹೋದರೆ ಅದನ್ನು ನ್ಯಾಯಾಲಯದ ಮೂಲಕ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ ಎಂದು 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಮಂಜುನಾಥ ಎಂ.ಎಸ್. ಹೇಳಿದರು.
ಇಲ್ಲಿಯ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂ, ತಾಲೂಕು ಆಡಳಿತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಶುಕ್ರವಾರ ಇಲ್ಲಿಯ ಎಪಿಎಂಸಿ ಸಭಾಭವನದಲ್ಲಿ ಏರ್ಪಡಿಸಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರು ತಮ್ಮ ಹಕ್ಕುಗಳ ಕುರಿತು ತಿಳಿದುಕೊಳ್ಳಬೇಕು. ಅಂದಾಗ ಮಾತ್ರ ಮೋಸ ಹೋದಾಗ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಎಪಿಎಂಸಿ ಕಾರ್ಯದಶಿರ್ ಎಸ್.ವಿ. ಶೈಲಜಾ ಅಧ್ಯಕ್ಷತೆ ವಹಿಸಿದ್ದರು.
ವಕೀಲರ ಸಂದ ಅಧ್ಯಕ್ಷ ಬಿ.ಎಚ್. ಬುರಡಿಕಟ್ಟಿ, ಪ್ರಮುಖರಾದ ಸುರೇಶ ದ್ಯಾವಕ್ಕಳವರ, ಕುಮಾರ ಮಡಿವಾಳರ, ಎಚ್.ಎಸ್. ಸಿದ್ದಪ್ಪನವರ ಮತ್ತಿತರರು ಉಪಸ್ಥಿತರಿದ್ದರು.