ಚಿಕ್ಕಮಗಳೂರಲ್ಲಿ ಮುಂದುವರಿದ ಮಳೆ, ಕಳಸ-ಕುದುರೆಮುಖ ರಸ್ತೆಯಲ್ಲಿ ಬಿರುಕು

6kls2
ಕಳಸ-ಕುದುರೆಮುಖ ಮುಖ್ಯರಸ್ತೆಯ ಬೇಡಕ್ಕಿ ಎಂಬಲ್ಲಿ ಬಿರುಕು ಉಂಟಾಗಿರುವುದು.
Published on

ಕಳಸ: ತಾಲೂಕಿನಾದ್ಯಂತ ಮಳೆ ಮುಂದುವರಿದಿದ್ದು ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಮಳೆ ಅಬ್ಬರ ಹೆಚ್ಚಾಗುತ್ತಿದ್ದು, ನದಿ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಭದ್ರಾ ನದಿ ನದಿ ಪಾತ್ರದ ಜಮೀನುಗಳು ಜಲಾವೃತವಾಗಿವೆ. ಕಳಸ-ಕುದುರೆಮುಖ ಮುಖ್ಯ ರಸ್ತೆಯ ಬೇಡಕ್ಕಿ ಎಂಬಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಳೆದ ವರ್ಷವೂ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು. ಈ ಸ್ಥಳಕ್ಕೆ ಈ ಬಾರಿ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಈ ಬಾರಿಯೂ ಅದೇ ಪ್ರದೇಶದಲ್ಲಿ ಮತ್ತೆ ಬಿರುಕು ಉಂಟಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕುದುರೆಮುಖ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿ ನೀರಿನ ಮಟ್ಟ ಏರಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net