

ಬೆಂಗಳೂರು: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ.24.10 ವೀಸಲಾತಿ ನಿಗದಿಪಡಿಸಿರುವ ಕಾಮಗಾರಿಗಳ ಮೊತ್ತವನ್ನು 50 ಲಕ್ಷ ರೂ.ಗಳಿಂದ 1 ಕೋಟಿಗೆ ಹೆಚ್ಚಿಸಿ ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ಮತ್ತು ನಿಯಮಗಳಿಗೆ ತಿದ್ದುಪಡಿ ತಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ.24.10 ಮೀಸಲಾತಿ ನಿಗದಿಪಡಿಸಿರುವ ಕಾಮಗಾರಿಗಳ ಮೊತ್ತವನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗೆ ಹಚ್ಚಿಸಲಾಗಿದೆ. 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿಯ ಗುತ್ತಿಗೆದಾರರಿಗೆ ಶೇ.17.15 ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ. 6.95 ಮೀಸಲಾತಿ ನಿಗದಿಪಡಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ 10 ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿದೆ.