ಓದಿದ ವಿದ್ಯಾಸಂಸ್ಥೆಗೆ ಕೊಡುಗೆ ಸಲ್ಲಲಿ

nes
ಜೆಎನ್‌ಎನ್‌ಸಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಕಟ್ಟಡ ನಿರ್ಮಾಣಕ್ಕೆ ಜಿ.ಎಸ್.ನಾರಾಯಣ ರಾವ್ ಗುದ್ದಲಿ ಪೂಜೆ ನೆರವೇರಿಸಿದರು. ಎಚ್.ಎಸ್.ಸುಂದರೇಶ್, ಎಸ್.ಎನ್.ನಾಗರಾಜ, ಡಾ. ವೈ.ವಿಜಯಕುಮಾರ್, ಟಿ.ಆರ್.ಅಶ್ವತ್ಥನಾರಾಯಣ ಶ್ರೇಷ್ಠಿ ಮುಂತಾದವರಿದ್ದರು.
Published on

ಶಿವಮೊಗ್ಗ: ನಮ್ಮಲ್ಲಿರುವ ಸಾಮಾಜಿಕ ಕಳಕಳಿಯು ನಾವು ಓದಿದ ವಿದ್ಯಾಸಂಸ್ಥೆಗೆ ಸದಾ ಅರ್ಪಿತವಾಗಿರಲಿ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಸಲಹೆ ನೀಡಿದರು.

ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿರಿಯ ವಿದ್ಯಾರ್ಥಿಗಳ ಸಂಘದ ಕಟ್ಟಡಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿರಿಯ ವಿದ್ಯಾರ್ಥಿಗಳ ಕಾರ್ಯ ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿರಲಿ ಎಂದರು.
ಈ ಕಾಲೇಜಿನಲ್ಲಿ ಓದಿರುವ ಅನೇಕ ವಿದ್ಯಾರ್ಥಿಗಳು ಆಂಧ್ರ, ಕರ್ನಾಟಕದ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳಾಗಿ, ವಿಭಿನ್ನ ಕ್ಷೇತ್ರಗಳ ಸಾಧಕರಾಗಿ ಹೊರಹೊಮ್ಮಿದ್ದಾರೆ. ಇಂದಿಗೂ ಲಾಭ-ನಷ್ಟದ ಲೆಕ್ಕಾಚಾರವಿಲ್ಲದೆ ಎನ್‌ಇಎಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾಲೇಜಿನ ಹಿರಿಯ ವಿದ್ಯಾರ್ಥಿ, ಹೊರನಾಡಿನ ರಾಜಗೋಪಾಲ ಜೋಷಿ ಮಾತನಾಡಿ, ವಿದ್ಯಾಸಂಸ್ಥೆ ನಮಗೆ ಜ್ಞಾನದ ಮೂಲಕ ವ್ಯಕ್ತಿತ್ವ ನೀಡಿದೆ. ಅಂತಹ ಸಂಸ್ಥೆಯ ಋಣ ತೀರಿಸುವ ಅವಕಾಶ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಮಾತನಾಡಿ, ನಿರ್ಮಾಣವಾಗಲಿರುವ ಕಟ್ಟಡದಲ್ಲಿ 800 ಆಸನಗಳ ಸುಸಜ್ಜಿತ ಸಭಾಂಗಣ, ಅತಿಥಿ ಗೃಹ ಇರಲಿದೆ. ಪಾರ್ಕಿಂಗ್ ಸೌಲಭ್ಯಗಳೊಂದಿಗೆ ಈ ಕಟ್ಟಡ ಮಲೆನಾಡಿನ ಭಾಗದಲ್ಲಿಯೇ ವಿಶೇಷ ವಿನ್ಯಾಸದ ಕಟ್ಟಡವಾಗಲಿದೆ ಎಂದು ಮಾಹಿತಿ ನೀಡಿದರು.
ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶ್ರೇಷ್ಠಿ, ಎಚ್.ಸಿ.ಶಿವಕುಮಾರ್, ಹಿರಿಯ ಆಜೀವ ಸದಸ್ಯರಾದ ಎ.ಎಸ್.ವಿಶ್ವನಾಥ, ರುಕ್ಮಿಣಿ ವೇದವ್ಯಾಸ, ರವೀಂದ್ರ, ವಿಖ್ಯಾತ, ಕಾಲೇಜಿನ ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಡಾ. ಕೆ.ಎಂ.ಬಸಪ್ಪಾಜಿ, ಸರ್ಜಾ ಸತ್ಯೋದಯ, ಜಿ.ಸುರೇಶ್, ಶಾಂತಿಕಿರಣ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net