ದೇಶದ ಅಭಿವೃದ್ಧಿಗೆ ಯುವಜನರ ಕೊಡುಗೆ ಹಿರಿದು

pesit collage programme
ಪಿಇಎಸ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಶಿಷ್ಯೋಪನಯನ ಪ್ರಾರಂಭೋತ್ಸವವನ್ನು ವಿಟಿಯು ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಉದ್ಘಾಟಿಸಿದರು. ಡಾ. ಆರ್.ನಾಗರಾಜ, ಡಾ. ಬಿ.ಎನ್.ಯುವರಾಜು ಇತರರಿದ್ದರು.
Published on

ಶಿವಮೊಗ್ಗ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ದೇಶವು ಸರ್ವತೋಮುಖ ಅಭಿವೃದ್ಧಿ ಹೊಂದಲು ಯುವಸಮೂಹದ ಕೊಡುಗೆ ಅವಶ್ಯಕ ಎಂದು ಬೆಳಗಾವಿಯ ವಿಟಿಯು (ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ) ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಹೇಳಿದರು.

ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಶನಿವಾರ ಪ್ರಸಕ್ತ ಶೈಕ್ಷಣಿಕ ಸಾಲಿನ 18ನೇ ಬ್ಯಾಚ್‌ನ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್‌ನ ಶಿಷ್ಯೋಪನಯನ ಪ್ರಾರಂಭೋತ್ಸವದಲ್ಲಿ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇಂಟರ್‌ನೆಟ್ ಕ್ಷೇತ್ರದ ಹಾನಿಕಾರಕ ತಂತ್ರಜ್ಞಾನಗಳ ವಿಷವರ್ತುಲದಲ್ಲಿ ಸಿಲುಕಿಕೊಂಡಿದ್ದು ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿ ಸಾಧನೆಗಳನ್ನು ಮಾಡುವ ಪ್ರಯತ್ನಗಳ ಕಡೆಗೆ ಗಮನಹರಿಸುವುದನ್ನು ಕಡಿಮೆ ಮಾಡಿದ್ದಾರೆ ಎಂದು ತಿಳಿಸಿದರು.
ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ಆರ್.ನಾಗರಾಜ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ದೈಹಿಕ, ಮಾನಸಿಕ ಸದೃಢತೆ ಹೊಂದಬೇಕು ಎಂದು ತಿಳಿಸಿದರು. ಶೈಕ್ಷಣಿಕವಾಗಿ ಅಸಾಧಾರಣ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎನ್.ಯುವರಾಜು, ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್.ಪ್ರಸನ್ನಕುಮಾರ್, ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಡಾ. ಲೈಕ್ವಿನ್ ಥಾಮಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net