ಅಪರಾಧಿಗೆ 95 ವರ್ಷ ಜೈಲು ಶಿಕ್ಷೆ

9-67fab0202cab7
Published on

ಕಾಸರಗೋಡು: ಅಂಗಡಿಗೆ ಸಾಮಗ್ರಿ ಖರೀದಿಸಲೆಂದು ಬಂದಿದ್ದ ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಅಪರಾಧಿ, ಮೊಗ್ರಾಲ್ ನಾಂಗಿ ಕಡಪ್ಪುರ ನಿವಾಸಿ ಅಬ್ದುಲ್ ರಹಮಾನ್ ಅಲಿಯಾಸ್ ಅಂದಾಯಿ(59)ಎಂಬಾತನಿಗೆ ಕಾಸರಗೋಡು ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶ ರಾಮು ರಮೇಶ್​ಚಂದ್ರ ಭಾನು ವಿವಿಧ ಕಾಯ್ದೆಗಳನ್ವಯ 95 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 3.75 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡ ಪಾವತಿಸದಿದ್ದಲ್ಲಿ ಅಪರಾಧಿ 15 ತಿಂಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕು. 2022 ಜೂನ್ 9ರಂದು ಹಾಗೂ ಇದಕ್ಕೂ ಮೊದಲು ಹಲವು ಬಾರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕುಂಬಳೆ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಲೈಂಗಿಕ ಕಿರುಕುಳ ನೀಡಿದ ವಿಷಯ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿಯೂ ಅಪರಾಧಿ ಬೆದರಿಕೆಯೊಡ್ಡಿದ್ದ ಎಂದೂ ದೂರಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net