ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸಹಕಾರ

30sgr2
ಸಾಗರ ಅಣಲೆಕೊಪ್ಪದ ಸ್ತ್ರೀಶಕ್ತಿ ಭವನ ಮೇಲ್ಭಾಗದಲ್ಲಿ ಪತ್ರಕರ್ತರ ನೂತನ ಸಭಾಭವನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಜಿ.ನಾಗೇಶ್, ಮಹೇಶ್ ಹೆಗಡೆ, ದೀಪಕ್ ಸಾಗರ್ ಇತರರಿದ್ದರು.
Published on

ಸಾಗರ: ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಅಗತ್ಯ ಸೌಲಭ್ಯ ಒದಗಿಸಲು ಸಹಕಾರ ನೀಡುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಅಣಲೆಕೊಪ್ಪದ ಸ್ತ್ರೀಶಕ್ತಿ ಭವನ ಮೇಲ್ಭಾಗದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಪತ್ರಕರ್ತರ ಚಟುವಟಿಕೆಗಳಿಗೆ ನೂತನ ಸಭಾಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಶೀಘ್ರದಲ್ಲೇ ಭವನ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜತೆ ಪತ್ರಿಕಾ ರಂಗ ಸಹ ಮಹತ್ವ ಪಡೆದಿದೆ. ಪತ್ರಕರ್ತರು ಸಂಘಟನಾತ್ಮಕವಾಗಿ ಸಮಾಜ ಜಾಗೃತಿಗೊಳಿಸುವ ಕೆಲಸ ಮಾಡಬೇಕು ಎಂದರು.
ನೂತನ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದ್ದು, ಶೀಘ್ರ ಕಾರ್ಯಾರಂಭ ಮಾಡಲಿದೆ. ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ. ವೆಚ್ಚದಲ್ಲಿ 36 ಕಿ.ಮೀ ರಸ್ತೆ, ಜಿಪಂನಿಂದ 10.30 ಕೋಟಿ ರೂ. ವೆಚ್ಚದಲ್ಲಿ 31.59 ಕಿ.ಮೀ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜಿ.ನಾಗೇಶ್, ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ, ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್ , ಉಪಾಧ್ಯಕ್ಷ ಲೋಕೇಶಕುಮಾರ್, ಖಜಾಂಚಿ ಎಂ.ಜಿ.ರಾಘವನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಂಗಾಬಾಯಿ, ಪೌರಾಯುಕ್ತ ಎಚ್.ಕೆ.ನಾಗಪ್ಪ, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಮಧುಮಾಲತಿ, ಲಲಿತಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net