ಇತರ ಇಲಾಖೆ ಜತೆ ಸಮನ್ವಯ ಸಾಧಿಸಿ

ಇತರ ಇಲಾಖೆ ಜತೆ ಸಮನ್ವಯ ಸಾಧಿಸಿ
Published on

ಗುಂಡ್ಲುಪೇಟೆ: ಅಧಿಕಾರಿಗಳು ಪಂಚಾಯಿತಿಗೆ ಸೀಮಿತವಾಗದೆ ತಮ್ಮ ವ್ಯಾಪ್ತಿಯ ಎಲ್ಲ ಇಲಾಖೆಗಳ ಸಮನ್ವಯ ಸಾಧಿಸುವಂತಾಗಬೇಕು ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆ ಬಗ್ಗೆ ಶುಕ್ರವಾರ ಆಯೋಜಿಸಿದ್ದ ಸಮನ್ವಯ ಸಭೆ ಉದ್ಘಾಟಿಸಿ ಮಾತನಾಡಿದರು.

ನಾಗರಿಕರಿಗೆ ದೊರಕಬೇಕಾದ ಸವಲತ್ತುಗಳನ್ನು ತಲುಪಿಸುವ ಹಾಗೂ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ, ಪೊಲೀಸ್, ಶಿಕ್ಷಣ, ಶಿಶು ಅಭಿವೃದ್ಧಿ ಹಾಗೂ ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಇತರ ಇಲಾಖೆ ಜತೆ ಸಮನ್ವಯ ಸಾಧಿಸುವುದು ಅಗತ್ಯವಾಗಿದೆ. ಈ ಮೂಲಕ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಶ್ರಮಿಸಬೇಕು ಎಂದು ಹೇಳಿದರು.

ಶಿರಸ್ತೇದಾರ್ ಮಹೇಶ್, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಮಹಿಳಾ ಮತ್ತು ಮಕ್ಕಳ ಹಿತರಕ್ಷಣಾ ಸಂಸ್ಥೆಯ ಸರಸ್ವತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net