ಕ್ರೀಡಾಕೂಟದಿಂದ ಸಮನ್ವಯ ಸಾಧ್ಯ: ಜಿಪಂ ಸಿಇಒ

police
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎನ್.ಹೇಮಂತ್, ಜಿ.ಕೆ.ಮಿಥುನ್‌ಕುಮಾರ್, ಎ.ಜೆ.ಕಾರಿಯಪ್ಪ, ಅನಿಲ್ ಕುಮಾರ್ ಭೂಮರಡ್ಡಿ ಉಪಸ್ಥಿತರಿದ್ದರು.
Published on

ಶಿವಮೊಗ್ಗ: ಪೊಲೀಸ್ ಇಲಾಖೆ ಶಿಸ್ತು ಪಾಲನೆ ಇಲಾಖೆಯಾಗಿದ್ದು, ಸಿಬ್ಬಂದಿ ವಿರಾಮವಿಲ್ಲದೆ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಒತ್ತಡದಿಂದ ಹೊರಬರಲು ಕ್ರೀಡಾಕೂಟ ಸಹಕಾರಿ ಎಂದು ಜಿಪಂ ಸಿಇಒ ಎನ್.ಹೇಮಂತ್ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿ, ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಯಲು ಕಾರಣವಾಗುತ್ತದೆ. ಹೊಂದಾಣಿಕೆಯಿಂದ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಕರ್ತವ್ಯದಲ್ಲಿ ಸಮನ್ವಯ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ರೀಡಾಕೂಟ ಸ್ಪರ್ಧೆಯಲ್ಲ, ಮನರಂಜನೆ. ಪ್ರತಿಯೊಬ್ಬರೂ ಸಂಭ್ರಮ ಮತ್ತು ಉತ್ಸಾಹದಿಂದ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಲು ವೇದಿಕೆಯಾಗಿದೆ. ಎಲ್ಲರೂ ಒತ್ತಡ ರಹಿತವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದರು.

ಎಸ್ಪಿ ಜಿ.ಕೆ ಮಿಥುನ್‌ಕುಮಾರ್, ಎಎಸ್ಪಿ ಅನಿಲ್‌ಕುಮಾರ್ ಭೂಮರಡ್ಡಿ, ಎ.ಜಿ.ಕಾರಿಯಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net