5 ವರ್ಷದ ಬಾಲಕಿ ಮೇಲೆ 15 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ!

Child Rape (1)
Published on

ಮುಂಬೈ: 15 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಮಾಡಿದ್ದಾನೆ. ಇದೀಗ ತಪ್ಪೊಪ್ಪಿಕೊಂಡಿರುವ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ವಿರುದ್ಧ ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿ, ಶಾಲೆಯ ವಠಾರದಲ್ಲಿ ಕುಳಿತು ಅಳುತ್ತಿರುವುದನ್ನು ದಾರಿ ಹೋಕರೊಬ್ಬರು ಗಮನಿಸಿದ್ದಾರೆ. ಕೂಡಲೇ ಅವರು ಬಂದು ವಿಚಾರಿಸಿ ಆಕೆಯನ್ನು ಮನೆಗೆ ಕರೆ ತಂದು ಬಿಟ್ಟಿದ್ದಾರೆ. ಘಟನೆಯ ಬಗ್ಗೆ ಬಾಲಕಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಕೂಡಲೇ ಎಚ್ಚೆತ್ತ ಪೋಷಕರು, ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ನಾಗ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಗಳು, ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಸಮೀಪದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದ ಪೊಲೀಸರು ನಲ್ಲಸೊಪಾರ ಎಂಬ ಪ್ರದೇಶದಲ್ಲಿದ್ದ ಆರೋಪಿ ಬಾಲಕನನ್ನು ಬಂಧಿಸಿದ್ದಾರೆ.

ಆರೋಪಿ ಬಾಲಕ, ಬಾಲಕಿಯ ಬಾಯಿಯನ್ನು ಬಟ್ಟೆಯಿಂದ ಬಿಗಿದು ಶಾಲಾ ವಠಾರದಲ್ಲಿದ್ದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಇದಕ್ಕೂ ಮೊದಲು ಆತನ ನನಗೆ ಹೊಡೆದಿದ್ದಾನೆ ಎಂದು ಬಾಲಕಿನ ಪೊಲೀಸರಲ್ಲಿ ಹೇಳಿಕೊಂಡಿದ್ದಾಳೆ.

ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರಿಗೆ ಬಾಲಕನ ಮುಖ ಪತ್ತೆಯಾಗಿತ್ತು. ಇದು ಆರೋಪಿ ಬಾಲಕನನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಹಾಯವಾಗಿತ್ತು. ಬಾಲಕನನ್ನು ಬಂಧಿಸಲು ಮೊದಲು ಆತನ ಮನೆಗೆ ಹೋಗಿದ್ದಾರೆ. ಈ ವೇಳೆ ಬಾಲಕ ಅಲ್ಲಿರಲಿಲ್ಲ. ಹೀಗಾಗಿ ಬಾಂದ್ರಾ, ಖಾರ್, ಜೋಗೇಶ್ವರಿ, ಚೆಂಬೂರ್ ಮತ್ತು ನಲ್ಲಸೊಪಾರ ಮುಂತಾದೆಡೆ ಹುಡುಕಾಡಿದ್ದಾರೆ. ಕೊನೆಗೆ ಕುಟುಂಬಸ್ಥರ ಮನೆಯಲ್ಲಿ ಆರೋಪಿ ಬಾಲಕ ಪತ್ತೆಯಾಗಿದ್ದಾನೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net