

ಒಡಿಶಾ: ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಡೆದಿದೆ.
ಘಟನೆಯು ಸಂಜೆ 7:20ರ ಸುಮಾರಿಗೆ ನಡೆದಿದ್ದು ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಕೊಲ್ಲತ್ತಾದಿಂದ ಚೆನ್ನೈ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂದು ವರದಿಯಾಗಿದೆ.