ಕರೊನಾ ಬುಲೆಟಿನ್​: ಇಂದು ಸೋಂಕು 1526, ಬಿಡುಗಡೆ 1451

Corona
Published on

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರವೊಂದೇ ದಿನ 1,526 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, ಇದುವರೆಗಿನ ಸೋಂಕಿತರ ಒಟ್ಟು ಪ್ರಮಾಣ 8,81,086ಕ್ಕೆ ತಲುಪಿದೆ.

ಇನ್ನು ಗುಣಮುಖರ ಪೈಕಿ ಒಂದೇ ದಿನದಲ್ಲಿ 1451 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆ ಆದವರ ಸಂಖ್ಯೆ 8,43,950ಕ್ಕೆ ಏರಿಕೆಯಾಗಿದೆ.

ಅದಾಗ್ಯೂ ರಾಜ್ಯದಲ್ಲಿ 25,379 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 401 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಂದೇ ದಿನದಲ್ಲಿ 12 ಮಂದಿ ಕೋವಿಡ್​ಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,738ಕ್ಕೆ ತಲುಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net