ಕರೊನಾ ಬುಲೆಟಿನ್​: ಸೋಂಕು 3,589; ಬಿಡುಗಡೆ 8,521

Corona
Published on

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ ಹೊಸದಾಗಿ 3,589 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 8,20,398ಕ್ಕೆ ತಲುಪಿದೆ.

ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 8,521 ಮಂದಿ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೆ ಗುಣವಾಗಿ ಬಿಡುಗಡೆ ಆಗಿರುವವರ ಸಂಖ್ಯೆ 7,49,740ಕ್ಕೆ ಏರಿಕೆಯಾಗಿದೆ.

ಅದಾಗ್ಯೂ ರಾಜ್ಯದಲ್ಲಿ 59,499 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿಂದಾಗಿ 935 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಒಂದೇ ದಿನದಲ್ಲಿ 49 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಕರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,140ಕ್ಕೆ ಏರಿಕೆ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net