

ಬೆಂಗಳೂರು: ರಾಜ್ಯದಲ್ಲಿ ಶನಿವಾರವೊಂದೇ ದಿನ ಹೊಸದಾಗಿ 3,014 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿನ ಇದುವರೆಗಿನ ಸೋಂಕಿತರ ಸಂಖ್ಯೆ 8,23,412ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ 7,468 ಮಂದಿ ಒಂದೇ ದಿನ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಸಂಖ್ಯೆ 7,57,208ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 55,017 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 956 ಮಂದಿ ಗಂಭೀರ ರೋಗಲಕ್ಷಣಗಳಿಂದಾಗಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇನ್ನು ಒಂದೇ ದಿನದಲ್ಲಿ 19 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ 11,168 ಜನರು ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.