ರಾಜ್ಯದಲ್ಲಿ ಇಂದು 1210 ಜನರಿಗೆ ಕರೊನಾ ಸೋಂಕು; 1800ಕ್ಕೂ ಅಧಿಕ ಮಂದಿ ಗುಣಮುಖ

CORONA
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಾ ಬಂದಿದ್ದು, ಶುಕ್ರವಾರಂದು 1,210 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,807 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 8,68,471ಕ್ಕೆ ಹೆಚ್ಚಿದೆ. ಪ್ರಸ್ತುತ 18,593 ಸಕ್ರಿಯ ಪ್ರಕರಣಗಳು ಬಾಕಿಯಿವೆ.

ಕಳೆದ 24 ಗಂಟೆಗಳಲ್ಲಿ 16 ಮಂದಿ ಕರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದಾಗಿ ಮೃತರಾದವರ ಸಂಖ್ಯೆ 11,928ಕ್ಕೆ ಏರಿದೆ. ಒಂದೇ ದಿನದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಗೆ ಕರೊನಾ ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಇಂದು 659 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,77,251ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 3,59,801 ಮಂದಿ ಗುಣಮುಖರಾಗಿದ್ದಾರೆ. ಕೇವಲ 4,222 ಸಕ್ರಿಯ ಪ್ರಕರಣಗಳು ಬಾಕಿಯಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net