

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1,222 ಮಂದಿಗೆ ಕರೊನಾ ಸೋಂಕಿರುವುದು ಕೋವಿಡ್-19 ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9,07,123ಕ್ಕೆ ತಲುಪಿದೆ. ಇನ್ನು ಗುಣಮುಖರ ಪೈಕಿ ಶುಕ್ರವಾರವೊಂದೇ ದಿನ 1,039 ಮಂದಿ ವಿವಿಧ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಒಟ್ಟು ಪ್ರಮಾಣ 8,79,735 ಆಗಿದೆ.
ಅದಾಗ್ಯೂ ರಾಜ್ಯದಲ್ಲಿ 15,380 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 223 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶುಕ್ರವಾರ 8 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,989ಕ್ಕೆ ತಲುಪಿದೆ.